ಯೆಶಾಯ 40: 3-5, 9-11
3 ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
4 ಎಲ್ಲಾತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವುಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
5 ಎಲ್ಲಾಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನುಕೂಗುತ್ತಾನೆ.
9 ಶುಭಸಮಾಚಾರವನ್ನುತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆಇಗೋ, ನಿನ್ನ ದೇವರು ಎಂದು ಹೇಳು.
10 ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
11 ಆತನುತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನುತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.