ಮತ್ತಾಯನು  28:2-7
2   ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
3   ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
4   ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
5   ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
6   ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
7   ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
 
Go to top