ಅಪೊಸ್ತಲರ ಕೃತ್ಯಗಳು 2:1-4
1  ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
2  ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
3  ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
4  ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
 
Go to top