ಮತ್ತಾಯನು 26:26-29
26  ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
27  ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ;
28  ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.

1 ಕೊರಿಂಥದವರಿಗೆ 11:26-29
26  ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
27  ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
28  ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
29  ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
Go to top