ಆದಿಕಾಂಡ 1:27
ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.

ಆದಿಕಾಂಡ  2:23-24
23  ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
24  ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.

ಆದಿಕಾಂಡ 1:28
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.

ಮತ್ತಾಯನು 19:6
ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
 
Go to top