ಮತ್ತಾಯನು 10:24
ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ

ಎಫೆಸದವರಿಗೆ 6:6-7
6   ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
7   ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ.

1 ತಿಮೊಥೆಯನಿಗೆ 3:5
(ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?

1 ತಿಮೊಥೆಯನಿಗೆ 3:15-16
15  ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.
16  ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
 
Go to top