ಯೆಶಾಯ 26:3-4
3   ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
4   ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
 
ಯೆಶಾಯ 54:10
ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.

ಯೆಶಾಯ 55:12
ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.

ಯೋಹಾನನು  14:27
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.

ಯೋಹಾನನು  16:33
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
 
Go to top