ಕೀರ್ತನೆಗಳು 5:2-3
2 ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
3 ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
ಕೀರ್ತನೆಗಳು 59:16ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.
ಕೀರ್ತನೆಗಳು 143:8ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.