ಕೀರ್ತನೆಗಳು 19:1-3
1   ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
2   ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
3   ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ.
 
 
ಕೀರ್ತನೆಗಳು 95:1-7
1   ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
2   ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
3   ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
4   ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.
5   ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
6   ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
7   ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ.
 
Go to top