ಮತ್ತಾಯನು 6:9-13
9   ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
10  ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
11  ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
12  ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
13  ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.

ಎಫೆಸದವರಿಗೆ 3:14-21
14  ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ
15  ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು
16  ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
17  ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
18  ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
19  ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
20  ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆ
21  ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ.
ಆಮೆನ್‌.
 
Go to top