ಇಬ್ರಿಯರಿಗೆ 12:2
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ

ರೋಮಾಪುರದವರಿಗೆ  1:17
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.

ಎಫೆಸದವರಿಗೆ 2:8
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

ರೋಮಾಪುರದವರಿಗೆ 5:1-2
1   ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
2   ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
 
Go to top