ಕೀರ್ತನೆಗಳು 139:13-18
13  ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
14  ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;
15  ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
16  ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
17  ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ.
18  ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
 
Go to top