ಕೀರ್ತನೆಗಳು 16:9
ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
 
ರೋಮಾಪುರದವರಿಗೆ 5:1-2
1  ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
2  ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
 
ಎಫೆಸದವರಿಗೆ 1:17-18
17  ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
18  ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
 
ಕೊಲೊಸ್ಸೆಯವರಿಗೆ 1:26-27
26  ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
27  ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
 
Go to top