2 ತಿಮೊಥೆಯನಿಗೆ 1:9-10
9  ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
10  ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
 
ತೀತನಿಗೆ 3:3-6
3  ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
4  ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
5  ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
6  ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
 
Go to top